ಕಾರ್ಕಳ : ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರು ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ಲಕ್ಷ್ಮೀದೇವಿ ಕಲ್ಯಾಣ ಮಂಟಪ ಸಮೀಪ ಶೃತಿನ್ ಮೃತದೇಹ ಪತ್ತೆಯಾಗಿದೆ.
ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಅ. 19ರಂದು ಕಾಣೆಯಾಗಿದ್ದರು. ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು. ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ತನ್ನ ಕಾರ್ಯಪರತೆಯಿಂದಲೇ ಉತ್ತಮ ಹೆಸರು ಸಂಪಾದಿಸಿದ್ದರು. ಅ.18ರಂದು ವಾರದ ರಜೆ ಪಡೆದಿದ್ದ ಶೃತಿನ್ ಅ.19ರಂದು ಸಿಎಲ್ ಪಡೆದಿದ್ದರು. ಬಳಿಕ ನಾಪತ್ತೆಯಾಗಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…