ಕಾರ್ಕಳ: ನಗರದ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕರಿಯಕಲ್ಲು ಸ್ಮಶಾನ ಮುಂಭಾಗದಲ್ಲಿ ಹಾದು ಹೋಗುತ್ತಿದ್ದ ಕಾರೊಂದರ ಸೈಲೆನ್ಸರ್‌ನಲ್ಲಿ ಕಾಣಿಸಿಕೊಂಡ ಹೊಗೆಯ ಅವಾಂತರದಿಂದ ಓರ್ವ ಬಲಿಯಾದ ಘಟನೆ ಎ.24ರಂದು ಸಂಭವಿಸಿದೆ.
ಗಿರೀಶ್ ಛಲವಾದಿ (39) ಘಟನೆಯಲ್ಲಿ ಜೀವ ಕಳೆದುಕೊಂಡವರು. ಬಾವಿ ತೋಡುವ ಕೆಲಸ ನಿರ್ವಹಿಸುತ್ತಿದ್ದ ಅವರು ಟಾಟಾ ಇಡಿಗೋ ಕಾರಿನಲ್ಲಿ ದುರ್ಗಪೊಪ, ಕೃಷ್ಣ, ಬಸಪ್ಪ ಎಂಬವರೊಂದಿಗೆ ಜೋಡುರಸ್ತೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಪ್ರಯಾಣಿಸುತ್ತಿದ್ದ ವಾಹನದ ಸೈಲೆನ್ಸರ್‌ನಿಂದ ದಟ್ಟ ಹೊಗೆ ಹೊರ ಉಗುಳುತ್ತಿತ್ತು. ಇದರಿಂದ ಗಾಬರಿಗೊಂಡು ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಚಾಲಕ ಗಿರೀಶ್ ಹಾಗೂ ಕೃಷ್ಣ ಎಂಬವರು ಕಾರಿನಿಂದ ಹೊರಬಂದು ರಸ್ತೆಯ ಮೇಲೆ ನಿಂತುಕೊಂಡಿದ್ದರು.
ಅದೇ ವೇಳೆಗೆ ಕಾರ್ಕಳ ಪುಲ್ಕೇರಿ ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಬಸ್ಸೊಂದು ರಸ್ತೆಯ ಬದಿ ನಿಂತುಕೊಂಡಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಅತಘಾತದ ತೀವ್ರತೆಗೆ ಕಾರಿನ ಹೊರಭಾಗ ರಸ್ತೆಯಲ್ಲಿ ನಿಂತುಕೊಂಡಿದ್ದ ಗಿರೀಶ್, ಕೃಷ್ಣ ಎಂಬವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಅದಾಗಲೇ ಗಿರೀಶ್ ಸಾವನೊಪ್ಪಿರುವ ಬಗ್ಗೆ ಅಲ್ಲಿನ ವೈದ್ಯರು ದೃಢ ಪಡಿಸಿದ್ದಾರೆ. ಕಾರು ಜಖಂ ಗೊಂಡಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…