ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದರೆ, ನ.23ರಂದು ನಡೆದ ಮತದಾನದಲ್ಲಿ ರಾಜೇಂದ್ರ ಶೆಟ್ಟಿ ಹಾಗೂ ಮಹೇಶ್ ಗೆಲುವು ಸಾಧಿಸಿದ್ದಾರೆ.ನೀರೆ ಗ್ರಾ.ಪಂ. (3 ಸ್ಥಾನ) ನೀರೆ – 1 (ಅ.ಪಂ. ಮಹಿಳಾ ಮೀಸಲಾತಿ) ರಲ್ಲಿ 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು.
ನೀರೆ – 2 (ಹಿಂದುಳಿದ ಅ ವರ್ಗ/ಸಾಮಾನ್ಯ 2 ಸ್ಥಾನವಿದ್ದು, ಕಾಂಗ್ರೆಸ್‌ನಿಂದ ಪ್ರಸನ್ನ ಆಚಾರ್ಯ ಸ್ಪರ್ಧಿಸಿದ್ದರೆ, ಮಹೇಶ್ ಹಾಗೂ ರಾಜೇಂದ್ರ ಶೆಟ್ಟಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಇವರಲ್ಲಿ ರಾಜೇಂದ್ರ ಶೆಟ್ಟಿ 422, ಮಹೇಶ್ 405 ಹಾಗೂ ಪ್ರಸನ್ನ ಆಚಾರ್ಯ 151 ಮತಗಳನ್ನು ಪಡೆದಿದ್ದು, ರಾಜೇಂದ್ರ ಮತು ಮಹೇಶ್ ಗೆಲುವು ಸಾಧಿಸಿದ್ದಾರೆ.
ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದೆ. ನೀರೆ -2 ಗ್ರಾ. ಪಂ. ನಲ್ಲಿ 375 ಪುರುಷರು, 442 ಮಹಿಳೆಯರು ಸೇರಿದಂತೆ ಒಟ್ಟು 817 ಮತದಾರರಿದ್ದು, 63.6475ಶೇ. ಮತದಾನವಾಗಿತ್ತು. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…