Featured

ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆ :  ಪಕ್ಷೇತರ ಅಭ್ಯರ್ಥಿಗಳ ಗೆಲುವು – vishwanews24

ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆ :  ಪಕ್ಷೇತರ ಅಭ್ಯರ್ಥಿಗಳ ಗೆಲುವು

ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದರೆ, ನ.23ರಂದು ನಡೆದ ಮತದಾನದಲ್ಲಿ ರಾಜೇಂದ್ರ ಶೆಟ್ಟಿ ಹಾಗೂ ಮಹೇಶ್ ಗೆಲುವು ಸಾಧಿಸಿದ್ದಾರೆ.ನೀರೆ ಗ್ರಾ.ಪಂ. (3 ಸ್ಥಾನ) ನೀರೆ – 1 (ಅ.ಪಂ. ಮಹಿಳಾ ಮೀಸಲಾತಿ) ರಲ್ಲಿ 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು.

ನೀರೆ – 2 (ಹಿಂದುಳಿದ ಅ ವರ್ಗ/ಸಾಮಾನ್ಯ 2 ಸ್ಥಾನವಿದ್ದು, ಕಾಂಗ್ರೆಸ್‌ನಿಂದ ಪ್ರಸನ್ನ ಆಚಾರ್ಯ ಸ್ಪರ್ಧಿಸಿದ್ದರೆ, ಮಹೇಶ್ ಹಾಗೂ ರಾಜೇಂದ್ರ ಶೆಟ್ಟಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಇವರಲ್ಲಿ ರಾಜೇಂದ್ರ ಶೆಟ್ಟಿ 422, ಮಹೇಶ್ 405 ಹಾಗೂ ಪ್ರಸನ್ನ ಆಚಾರ್ಯ 151 ಮತಗಳನ್ನು ಪಡೆದಿದ್ದು, ರಾಜೇಂದ್ರ ಮತು ಮಹೇಶ್ ಗೆಲುವು ಸಾಧಿಸಿದ್ದಾರೆ.

ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದೆ. ನೀರೆ -2 ಗ್ರಾ. ಪಂ. ನಲ್ಲಿ 375 ಪುರುಷರು, 442 ಮಹಿಳೆಯರು ಸೇರಿದಂತೆ ಒಟ್ಟು 817 ಮತದಾರರಿದ್ದು, 63.6475ಶೇ. ಮತದಾನವಾಗಿತ್ತು. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

11 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

46 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

58 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago