ಕಾರ್ಕಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ – Vishwanews24
ಕಾರ್ಕಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಕಾರ್ಕಳ : ನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಸವಿತಾ ಹೆಗ್ಡೆ(54) ಆತ್ಮಹತ್ಯೆ ಮಾಡಿಕೊಂಡವರು. ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಮನೆಯಲ್ಲಿ ಪತಿಯೊಂದಿಗೆ ವಾಸವಿದ್ದರು. ಇಂದು ಬೆಳಿಗ್ಗೆ ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮನೆಯ ಸಮೀಪದ ರೇಷ್ಮೆ ಕಟ್ಟಡದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತಿ ರವೀಂದ್ರ ಹೆಗ್ಡೆ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಕರಾವಳಿ ಜಿಲ್ಲೆಗಳಲ್ಲಿ ಪಡಿತರದ ಜತೆಗೆ ಕುಚ್ಚಲಕ್ಕಿ ನೀಡಲು ಸರಕಾರ ಬದ್ಧ : ಸಚಿವ ಕೋಟ – Vishwanews24
