Featured

ಕಾರ್ಕಳ – ಪಡುಬಿದ್ರಿ ಜಂಕ್ಷನ್‌ : ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಪಾದಚಾರಿ ಸಾವು – Vishwanews24

ಕಾರ್ಕಳ – ಪಡುಬಿದ್ರಿ ಜಂಕ್ಷನ್‌ : ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಮೇಲೆ ಲಾರಿ ಹರಿದು ಪಾದಚಾರಿ ಸಾವು – Vishwanews24

ಪಡುಬಿದ್ರಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಲಾರಿಯ ಚಕ್ರ ಹರಿದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡುತ್ತಿದ್ದ ಜಯರಾಮ ಆಚಾರ್ಯ (51) ಎಂದು ಗುರುತಿಸಲಾಗಿದೆ.

ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಸ್ತೆ ದಾಟಲು ನಿಂತಿದ್ದ ಜಯರಾಮ ಅವರ ಮೇಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದು, ಸೊಂಟದ ಮೇಲೆ ಲಾರಿಯ ಚಕ್ರ ಚಲಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

1 hour ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

2 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

2 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

2 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago