Featured

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ – Vishwanews24

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಕಾರ್ಕಳ : ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ಕಳೆದ ಅ. 22ರಂದು ಪರಶುರಾಮ ಥೀಂ ಪಾಕ್೯ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು.

ಇದೇ ಸಂದರ್ಭ ತೆರವು ಮಾಡಲಾದ ಪ್ರತಿಮೆಯ ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಕಾಂಗ್ರೆಸ್ ಮುಖಂಡರು ಸಾರ್ವಜನಿಕರಿಗೆ ಮಾಹಿತಿ ನೀಡುವ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದ್ದವು. ಇದನ್ನಾಧರಿಸಿ ಎರ್ಲಪಾಡಿ ಗ್ರಾ.ಪಂ. ಅಧ್ಯಕ್ಷ ಸುನಿಲ್ ಹೆಗ್ಡೆ ಕಾರ್ಕಳ ನಗರ ಠಾಣೆಗೆ ನೀಡಿದ ದೂರಿನನ್ವಯ ಕಾಂಗ್ರೆಸ್ ಮುಖಂಡರಾದ ಪುರಸಭೆ ಸದಸ್ಯ ಶುಭದ ರಾವ್, ಮಾಜಿ ಅಧ್ಯಕ್ಷ ಸುಭಿತ್ ಕುಮಾರ್, ಮಾಜಿ ಸದಸ್ಯ ವಿವೇಕಾನಂದ ಶೆಣೈ ಮತ್ತು ಐವನ್ ಮಿರಾಂಡ ಸೇರಿದಂತೆ ಒಟ್ಟು 4 ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ಐಪಿಎಸ್ ಸೆಕ್ಷನ್ 442, 505(2) ಮತ್ತು 34 ಪ್ರಕಾರ ಕೇಸು ದಾಖಲಿಸಿದ್ದರು.

ಇದೇ ಪ್ರಕರಣವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಪರಿಣಾಮ, ಏ.4ರಂದು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಕೆರೆಬೆಟ್ಟು ಪ್ರಸನ್ನ ಶೆಟ್ಟಿ ಈ ಪ್ರಕರಣದ ಬಗ್ಗೆ ವಾದಿಸಿದ್ದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago