ಉಡುಪಿ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ – Vishwanews24

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ಕಾರ್ಕಳ : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್‌ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ, ತೂಕ 15 ಟನ್ ಎಂದು ಪ್ರಚಾರ ಮಾಡಲಾಗಿತ್ತು. ಕೊನೆಗೆ ಕಂಚಿನ ಪ್ರತಿಮೆ ಎಂದು ಪ್ರಚಾರ ನೀಡಲಾದ ಪ್ರತಿಮೆ ‘ಫೈಬರ್‌’ನಿಂದ ನಿರ್ಮಿಸಲ್ಪಟ್ಟಿದೆ ಎಂಬುದು ಬೆಳಕಿಗೆ ಬಂದಿತ್ತು. ಅಲ್ಲದೆ ಚುನಾವಣಾ ಫಲಿತಾಂಶ ಬಂದ ಬಳಿಕ ಪರಶುರಾಮನ ಪ್ರತಿಮೆಯನ್ನು ರಾತ್ರೋರಾತ್ರಿ ಮಾಯಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿದ್ದವು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

8 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

9 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago