ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಸೋಮವಾರ (ನ.11ರಂದು) ಕಾರ್ಕಳ ತಾಲೂಕು ನ್ಯಾಯಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿ ಕೃಷ್ಣ ನಾಯ್ಕನಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದು, ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದರು.
ಕೃಷ್ಣ ನಾಯ್ಕ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…