Featured

ಕಾರ್ಕಳ: ಪರ್ಪಲೆಗಿರಿ ದೈವಸ್ಥಾನಕ್ಕೆ ತೆರಳಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸತ್ಯ ಪ್ರಮಾಣ ಮಾಡಿದ  ರಾಧಾಕೃಷ್ಣ ಹಿರ್ಗಾನ -Vishwanews24

ಕಾರ್ಕಳ: ಪರ್ಪಲೆಗಿರಿ ದೈವಸ್ಥಾನಕ್ಕೆ ತೆರಳಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸತ್ಯ ಪ್ರಮಾಣ ಮಾಡಿದ  ರಾಧಾಕೃಷ್ಣ ಹಿರ್ಗಾನ -Vishwanews24

ಕಾರ್ಕಳ, : ಫೇಸ್‌ಬುಕ್‌‌ನಲ್ಲಿ ದೇಶದ್ರೋಹದ ಪೋಸ್ಟ್‌‌ ವಿಚಾರಕ್ಕೆ ಸಂಬಂಧಪಟ್ಟಂತೆ ಪರ್ಪಲೆಗಿರಿ ದೈವಸ್ಥಾನದಲ್ಲಿ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರು ಸತ್ಯ ಪ್ರಮಾಣ ಮಾಡಿದ್ದಾರೆ.

“ಸ್ವಾಮಿ ದೈವ, ಕಲ್ಲುರ್ಟಿ, ಕಲ್ಕುಡ, ತೂಕತ್ತೇರಿ ನಿಮ್ಮಲ್ಲೊಂದು ಪ್ರಾರ್ಥನೆ. ನಾನು ನನ್ನ ಫೇಸ್‌ಬುಕ್‌‌ ವಾಲ್‌ನಲ್ಲಿ ದೇಶದ್ರೋಹದ ಪೋಸ್ಟ್‌ ಮಾಡಿದ್ದೇನೆ ಎಂದು ಇಲ್ಲಿನ ಶಾಸಕರು, ನಾಯಕರು ಹಾಗೂ ಅವರ ಹಿಂಬಾಲಕರು ನನ್ನ ಮೇಲೆ ದೇಶದ್ರೋಹದ ಆರೋಪ ಮಾಡಿದ್ದಾರೆ. ಆದರೆ, ಆ ಪೋಸ್ಟ್‌ ನಾನು ಹಾಕಿಲ್ಲ ಎಂದು ನಿಮಗೆ ತಿಳಿದಿದೆ. ನನ್ನ ಮೇಲೆ ಆರೋಪ ಮಾಡಿದವರನ್ನು ನೀವೇ ನೋಡಿಕೊಳ್ಳಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ” ಎಂದು ಸತ್ಯ ಪ್ರಮಾಣ ಮಾಡಿದ್ದಾರೆ.

ರಾಧಾಕೃಷ್ಣ ನಾಯಕ್ ಅವರು ಫೇಸ್ ಬುಕ್ ಪುಟದಲ್ಲಿ ಕಳೆದ ಒಂದು ವರ್ಷದ ಹಿಂದೆ ಯೋಧರ ವಿರುದ್ಧ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಇದರ ಕುರಿತು ಕೆಲವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದರೆ ತಮ್ಮ ಹೆಸರಿನ ಫೇಕ್ ಐಡಿ ಮೂಲಕ ಕಿಡಿಗೇಡಿಗಳು ಮಾಡಿದ ಪೋಸ್ಟ್ ಇದಾಗಿದೆ ಎಂದು ಹಾಗೂ ಇದರ ವಿರುದ್ದ ಕ್ರಮ ಕೈಗೊಳ್ಳುವಂತೆ ಉತ್ತರ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ 2020ರ ಆಗಸ್ಟ್ ನಲ್ಲಿ ರಾಧಾಕೃಷ್ಣ ಅವರು ದೂರು ನೀಡಿದ್ದರು.

ಇದೇ ವಿಚಾರವಾಗಿ ಕಾರ್ಕಳ ಠಾಣೆಗೆ ವಿಚಾರಣೆಗೆ ಬಂದಿದ್ದ ರಾಧಕೃಷ್ಟ ಅವರಿಗೆ ಎಸ್‌ಐ ಮಧು ರಾಧಾಕೃಷ್ಣ ಅವರು ಎದೆಗೆ ಕಾಲಿನಿಂದ ಒದ್ದು ದೌರ್ಜನ್ಯ ನಡೆಸಿಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು. ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರು ಪರ್ಪಲೆಗಿರಿ ದೈವಸ್ಥಾನಕ್ಕೆ ತೆರಳಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸತ್ಯ ಪ್ರಮಾಣ ಮಾಡಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

6 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

12 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

12 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

13 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

15 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

15 hours ago