ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ – vishwanews24
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ
ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.
ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಎಂಟು ಮಂದಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಬಾಕಿ ಕಡತಗಳು, ಉದ್ದಿಮೆ ಪರವಾನಗಿ, ಖಾತೆ ತಿದ್ದುಪಡಿ, ಖಾತೆ ವರ್ಗಾವಣೆ ಹಾಗೂ ಜನನ, ಮರಣ ಪ್ರಮಾಣಪತ್ರಗಳ ಅರ್ಜಿಗಳ ವಿಲೇವಾರಿ ಕುರಿತು ದಾಖಲೆಗಳನ್ನು ಪರಿಶೀಲಿಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಪರಿಶೀಲನೆ ಆಧರಿಸಿ ಸಮಗ್ರ ವರದಿ ಸಿದ್ಧಪಡಿಸುವ ಸಾಧ್ಯತೆ ಇದೆ.
