ಕಾರ್ಕಳ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರು ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು. ಅವರ ಪತ್ನಿ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದು, ಗುರುವಾರ ರಾತ್ರಿ 7.30ರ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.
ಗುರುವಾರ ರಾತ್ರಿ ಪತ್ನಿಗೆ ಕರೆ ಮಾಡಿ ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ ಇದಾದ ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…