ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಸಂಭವಿಸಿದೆ.
ಬಾಲಕೃಷ್ಣ (44) ಮೃತ ವ್ಯಕ್ತಿ .ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಅಕ್ಟೋಬರ್ 20 ರಂದು ಬಾಲಕೃಷ್ಣ ಸಾವನ್ನಪ್ಪಿದ್ದರು. ಬಾಲಕೃಷ್ಣ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ಸಹೋದರ ರಾಮಕೃಷ್ಣ ಎಂಬವರು ಅಜೆಕಾರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.ತಾನು ಮತ್ತು ಪ್ರಿಯಕರ ಊಟದಲ್ಲಿ ವಿಷ ಬೆರೆಸಿ ನೀಡಿದ್ದಾಗಿ ತನ್ನ ಸಹೋದರ ಸಂದೀಪ್ ಜೊತೆ ಪ್ರತಿಮಾ ಬಾಯಿ ಬಿಟ್ಟಿದ್ದಾಳೆ. ಸದ್ಯ ಮೃತರ ಪತ್ನಿ ಪುತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಅಜೆಕಾರು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…