ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದು ಗ್ರಾಮದ ಅಲಿಮಾರು ಗುಡ್ಡೆಯ ನಿವಾಸಿ ಎ.ಸಿ. ಶರ್ಮಿಳಾ ಅವರು ವಂಚನೆಗೊಳಗಾದ ಸಂತ್ರಸ್ತೆ. ಇವರು ಪುತ್ತೂರು ಆರ್ಯಾಪು ನಿವಾಸಿ ವಸಂತ ಬಿ. ಎಂಬುವವರನ್ನು ಕಳೆದ ಅ. 29ರಂದು ವಿವಾಹವಾಗಿದ್ದರು.
ಇದನ್ನೂ ಓದಿ 👇
ಮದುವೆಯ ಮಾತುಕತೆಯ ಸಂದರ್ಭ ಆರೋಪಿ ವಸಂತ ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮುಚ್ಚಿಟ್ಟಿದ್ದನು. ವಿವಾಹವಾದ ಬಳಿಕ ಕೇವಲ ಒಂದು ವಾರ ಪತ್ನಿಯೊಂದಿಗೆ ಇದ್ದು, ನಂತರ ತನ್ನ ಪ್ರೇಮ ವಿಚಾರವನ್ನು ಬಯಲು ಮಾಡಿದ್ದಾನೆ. ಅಲ್ಲದೆ, ಈ ಬಗ್ಗೆ ಪತ್ನಿಗೆ ಪರಿಹಾರ ರೂಪದಲ್ಲಿ 6 ಲಕ್ಷ ರೂ. ನೀಡುವುದಾಗಿ ನಂಬಿಸಿ, ಈಗ ಹಣವನ್ನೂ ನೀಡದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕುಟುಂಬಸ್ಥರ ಮೇಲೂ ದೂರು: ಆರೋಪಿ ವಸಂತನ ಪ್ರೇಮ ವ್ಯವಹಾರದ ಬಗ್ಗೆ ಆತನ ತಾಯಿ ವಿಮಲ, ಅಣ್ಣ ರಘು, ಅಣ್ಣನ ಹೆಂಡತಿ ವಿನೋದ, ಸಹೋದರಿಯರಾದ ಪೂರ್ಣಿಮ, ಅಶ್ವಿನಿ ಮತ್ತು ಭಾವಂದಿರಾದ ಅಶೋಕ ಹಾಗೂ ಸುರೇಶ ಅವರಿಗೆ ಮೊದಲೇ ತಿಳಿದಿತ್ತು. ಆದರೂ ಸತ್ಯವನ್ನು ಮರೆಮಾಚಿ, ವಸಂತನಿಗೆ ಈ ವಂಚನೆಯಲ್ಲಿ ಸಹಕರಿಸಿದ್ದಾರೆ ಎಂದು ಶರ್ಮಿಳಾ ಆರೋಪಿಸಿದ್ದಾರೆ.
ಇದನ್ನೂ ಓದಿ 👇
ಪತ್ನಿ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು BNS ಕಲಂ 318(2), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…