Featured

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ-2025 – vishwanews24

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ ; ಕಬಡ್ಡಿ, ತ್ರೋಬಾಲ್ ಪಂದ್ಯಾಟ

ಉಡುಪಿ,: ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ, ಮಡಿವಾಳ ಯುವ ಘಟಕ ಹಾಗೂ ಮಡಿವಾಳ ಮಹಿಳಾ ಘಟಕದ ಆತಿಥ್ಯದಲ್ಲಿ ‘ಮಡಿವಾಳ ಮಾಚಿದೇವ ಟ್ರೋಫಿ-2025’ಕ್ಕಾಗಿ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಪುರುಷರ ಪ್ರೊ ಕಬಡ್ಡಿ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಫೆ.23ರ ರವಿವಾರ ಕಾರ್ಕಳ ಕಾಬೆಟ್ಟು ಸಮುದಾಯ ಭವನದ ಅಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಘಟಕ ಅಧ್ಯಕ್ಷ ಸಂಪತ್ ಕುಮಾರ್ ಕಣಂಜಾರು ತಿಳಿಸಿದ್ದಾರೆ.

ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 9 ಗಂಟೆಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರು ಮಡಿವಾಳ ಮಾಚಿದೇವ ಟ್ರೋಫಿ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಮಡಿವಾಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಮುನಿಯಾಲು ಪ್ರವರ್ತಕ ಉದಯ ಶೆಟ್ಟಿ ಮುನಿಯಾಲು, ಮಾಚಿದೇವ ನಿಗಮದ ನಿಕಟಪೂರ್ವ ಅಧ್ಯಕ್ಷ ರಾಜು ಎಂ. ತಲ್ಲೂರು ಸಹಿತ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸಂಜೆ 4:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಸಭಾಭವನ ಕಟ್ಟಡ ಸಮಿತಿ ಅಧ್ಯಕ್ಷ ಉದಯ್ ಸಾಲ್ಯಾನ್ ಅಜ್ಜಾಡಿ, ಸಮಾಜ ಸೇವಕ ಬೋಳ ಪ್ರಶಾಂತ್ ಕಾಮತ್, ಡಾ. ರವೀಂದ್ರ ಶೆಟ್ಟಿ ಬಜಗೋಳಿ, ರತ್ನಾಕರ ಅಮೀನ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಉದ್ಯಮಿ ಸಂಜೀವ ಮಡಿವಾಳ ಕಾಬೆಟ್ಟು ಭಾಗವಹಿಸಲಿದ್ದಾರೆ ಎಂದರು.

ಮಡಿವಾಳ ಸಮಾಜದವರನ್ನು ಸಂಘಟಿಸುವ ಮತ್ತು ಒಂದೇ ವೇದಿಕೆಯಲ್ಲಿ ಒಟ್ಟು ಸೇರಿಸುವ ನಿಟ್ಟಿನಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025 ಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಪುರುಷರ ವಿಭಾಗದ ಪ್ರೊ ಕಬಡ್ಡಿಯಲ್ಲಿ 15 ತಂಡ ಗಳು ಹಾಗೂ ಮಹಿಳೆಯರ ತ್ರೋಬಾಲ್ ಸ್ಪರ್ಧೆಯಲ್ಲಿ 12 ತಂಡಗಳು ಸ್ಪರ್ಧಿಸಲಿವೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಮಡಿವಾಳ ಸಮಾಜದ ತಂಡಗಳು ಸ್ಪರ್ಧಿಸಲಿವೆ ಎಂದರು.

ಪ್ರೊ ಕಬಡ್ಡಿ ವಿಜೇತರಿಗೆ ಕ್ರಮವಾಗಿ 11,111 ರೂ., 7,777, 3,333 ಹಾಗೂ 2,222ರೂ.ನಗದು ಸಹಿತ ಟ್ರೋಫಿಯನ್ನು ನೀಡಲಾಗುವುದು. ಅದೇ ರೀತಿ ತ್ರೋಬಾಲ್ ವಿಜೇತರಿಗೆ 5,555, 3,333ರೂ ಹಾಗೂ ಟ್ರೋಫಿ ಸಿಗಲಿದೆ. ಅಲ್ಲದೇ ಉತ್ತಮ ಪ್ರದರ್ಶನಕ್ಕಾಗಿ ವೈಯಕ್ತಿಕ ಬಹುಮಾನಗಳನ್ನೂ ನೀಡಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಸಾದ್ ಕುಮಾರ್ ಐಸಿರ ಕುಕ್ಕುಂದೂರು, ಸದಾನಂದ್ ಸಾಲ್ಯಾನ್ ಕೆರ್ವಾಶೆ, ಸುಮಾ ಜಯಕರ ಮಡಿವಾಳ ನಕ್ರೆ, ಸವಿತಾ ಸುಧಾಕರ ಅಜೆಕಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

6 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

10 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

10 hours ago