ಕಾರ್ಕಳ: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿಟ್ಟೆ ದರ್ಖಾಸು ನಿವಾಸಿ ಸುರೇಶ ಕೊರಗ ಪೂಜಾರಿ(53) ಬಂಧಿತ ಆರೋಪಿ. ಈತ ಜ.16ರಂದು ಸೊಸೈಟಿ ಬೀಗ ಮುರಿದು ಒಳಗೆ ನುಗ್ಗೆ ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಕಳ್ಳತನಕ್ಕೆ ಪ್ರಯತ್ನಿಸಿದ ವ್ಯಕ್ತಿ ಗುರುತು ಪತ್ತೆಯಾಗಿತ್ತು.
ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಜ.17ರಂದು ಆರೋಪಿಯನ್ನು ಬಂಧಿಸಿದರು. ಆರೋಪಿಗೆ ನ್ಯಾಯಾ ಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…