Featured

ಕಾರ್ಕಳ : ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ – vishwanews24

ಕಾರ್ಕಳ : ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾರ್ಕಳ : ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಬುಧವಾರ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಎಂಬವರು ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬುಧವಾರ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆ ಇಂದು ಪ್ರತಿಭಟನೆ ಆಯೋಜಿಸಿದ್ದು, ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಕಾರಣ ಈ ದುರಂತ ನಡೆದಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು. ಜೊತೆಗೆ ಖಾಸಗಿ ಬಸ್ ಗಳ ಅಶಿಸ್ತಿಗೆ ಕಡಿವಾಣ ಹೇರದ ಸಾರಿಗೆ ಇಲಾಖೆ ವಿರುದ್ಧವೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಭಾಗದಲ್ಲಿ ಬಸ್ಸುಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ತುಂಬ ತೊಂದರೆಯಾಗುತ್ತಿದೆ. ತರಗತಿಗೆ ಹಾಜರಾಗುವುದು ತಡವಾದರೆ ವಿದ್ಯಾಸಂಸ್ಥೆ ಯಿಂದಲೂ ವಿದ್ಯಾರ್ಥಿಗಳಿಗೆ ಬೈಗುಳ ಸಿಗುತ್ತವೆ. ಆದ್ದರಿಂದ ಕಾಲೇಜು ತರಗತಿ ಸಮಯದಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

5 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

5 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

6 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

8 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

8 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

9 hours ago