ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ.
ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ.ಕೂಡಲೇ ಆತನನ್ನು ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಕೊನೆಯುಸಿರೆಳೆದಿದ್ದಾರೆ. ಮೃತ ಜನಿತ್ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಕಾರ್ಕಳ-ಪಡುಬಿದ್ರಿ ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ಸಂಚರಿಸುವ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿರುತ್ತಾರೆ. ವಿದ್ಯಾರ್ಥಿಗಳು ಬಸ್‌ಗಳ ಮೆಟ್ಟಿಲ ಮೇಲೆ ನೇತಾಡಿಕೊಂಡು ಹೋಗಬೇಕಾದ ಅಗತ್ಯವಿದ್ದು ಇದು ದುರಂತಕ್ಕೆ ಕಾರಣವಾಗುತ್ತಿದೆ. ಆದ್ರೂ ಹೆಚ್ಚುವರಿ ಬಸ್ ಸೌಲಭ್ಯ ಕೊಡುತ್ತಿಲ್ಲ. ಈ ರೂಟಲ್ಲಿ ಸರ್ಕಾರಿ ಬಸ್ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…