ಕಾರ್ಕಳ : ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ.
ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.
ಆಟೋರಿಕ್ಷಾದಲ್ಲಿ ಉತ್ತರ ಭಾರತದ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…