ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ಅರೋಪಿ ದಿಲೀಪ್ ಹೆಗ್ಡೆಗೆ ನ. 7ರ ವರೆಗೆ ನ್ಯಾಯಾಂಗ ಬಂಧನ – vishwanews24

Featured, ಉಡುಪಿ

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ಅರೋಪಿ ದಿಲೀಪ್ ಹೆಗ್ಡೆಗೆ ನ. 7ರ ವರೆಗೆ ನ್ಯಾಯಾಂಗ ಬಂಧನ

ಕಾರ್ಕಳ: ಕೆಲ ದಿನಗಳ ಹಿಂದೆ ನಡೆದ ಕಾರ್ಕಳ ತಾಲೂಕಿನ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಅರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೋಮವಾರ (ಅ.28) ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್‌ ಹೆಗ್ಡೆಗೆ ನ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಆರಂಭದಲ್ಲಿ ದಿಲೀಪ್‌ ಹೆಗ್ಡೆಯನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಪ್ರತಿಮಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್‌ಜೈಲಿನಲ್ಲಿದ್ದಾಳೆ.

ಅಜೆಕಾರಿನ ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ವ್ಯವಸ್ಥಿತ ಸಂಚು ರೂಪಿಸಿ ಹತ್ಯೆ ಮಾಡಿದ್ದರು. ಪತಿಯ ಆಹಾರಕ್ಕೆ ನಿಯಮಿತವಾಗಿ ವಿಷ ಪದಾರ್ಥವೊಂದನ್ನು ಸೇರಿಸಿ ಪತ್ನಿ ಪ್ರತಿಮಾ ನೀಡುತ್ತಿದ್ದಳು. ಬಳಿಕ ಕಳೆದ ಅ.20ರಂದು ಇಬ್ಬರು ಸೇರಿ ಮಲಗಿದ್ದ ಬಾಲಕೃಷ್ಣ ಅವರ ಮುಖಕ್ಕೆ ಒತ್ತಿ ಹಿಡಿದು ಹತ್ಯೆ ಮಾಡಿದ್ದರು.

Leave a Reply