ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ.
ಪೊಲೀಸ್ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ.
ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…