Featured

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ : ಸಹೋದರ ಆರೋಪ – vishwanews24

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು : ಸಹೋದರ ಪ್ರಕಾಶ್‌ ಪೂಜಾರಿ

ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್‌ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್‌ ಪೂಜಾರಿ ಪ್ರಶ್ನೆ ಮಾಡಿದ್ದಾರೆ.ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್‌ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ.

ಪೊಲೀಸ್‌ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ.

ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.

Vishwa News 24

Recent Posts

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

10 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

16 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

21 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

26 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

38 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

51 minutes ago