ಕಾರ್ಕಳ: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ್ದು, ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ಕಾರ್ಕಳದ ದಿಲೀಪ್ ಹೆಗ್ಡೆ ಸೇರಿಕೊಂಡು ಹತ್ಯೆಗೈರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದ್ದು, ಅವರಿಬ್ಬರ ಬಂಧನವಾಗಿದೆ. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ದೂರು ನೀಡಿದ್ದರು. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
ಉಸಿರುಗಟ್ಟಿ ಸಾವು ಸಂಭವಿಸಿರುವುದು, ಮುಖದಲ್ಲಿ ಗಾಯದ ಗುರುತು ಮೂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್ ತನಿಖೆ ಮತ್ತಷ್ಟು ಚುರುಕುಕೊಂಡಿದೆ. ಮೊಬೈಲ್ ಸಂಭಾಷಣೆ, ಕರೆ ಮಾಡಿದ ವಿವರ, ನೆಟ್‌ವರ್ಕ್ ಮಾಹಿತಿ, ಸಿಸಿಟಿವಿ ಬಗ್ಗೆ ಪೊಲೀಸರಿಂದ ತಾಂತ್ರಿಕ ತನಿಖೆ ವೇಗ ಪಡೆದುಕೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…