ಕಾರ್ಕಳ: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಕಾರ್ಕಳ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸಂಚಾರಿ ಪೀಠ ವು ಮಾ.10ಕ್ಕೆ ಮುಂದೂಡಿದ್ದರೆ.
ಎರಡನೇ ಆರೋಪಿ ದಿಲೀಪ್ ಹೆಗ್ಡೆ ಪರ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.ಮಂಗಳವಾರ ಪ್ರತಿಮಾ ಅವರ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣಾ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಆರೋಪಿಗಳಿಬ್ಬರನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.
ಏನಿದು ಪ್ರಕರಣ ?
2024ರ ಅ.20ರಂದು ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ(42) ಎಂಬವರನ್ನು ಆತನ ಪತ್ನಿ ಪ್ರತಿಮ ತನ್ನ ಪ್ರಿಯಕರ ದಿಲೀಪ್ ಹೆಗ್ಡೆಯ ಜತೆ ಸೇರಿಕೊಂಡು ಹತ್ಯೆಗೈದಿದ್ದಳು. ಪೊಲೀಸ್ ತನಿಖೆಯಿಂದ ಪ್ರಕರಣ ಬಯಲಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿತ್ತು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…