ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, ಅದರ ವಿಚಾರಣೆ ಮಾ. 11ರಂದು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದಲ್ಲಿ ನಡೆಯಲಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ಸಲ್ಲಿಸಿದ್ದರು. ಅದರ ಕುರಿತಂತೆ ವಿಚಾರಣೆ ನಡೆದ ಬಳಿಕ ಜಾಮೀನು ನೀಡಬೇಕೋ ? ಅಥವಾ ಬೇಡವೋ ಅನ್ನುವುದನ್ನು ನ್ಯಾಯಾಧೀಶರು ನಿರ್ಧರಿಸಲಿದ್ದಾರೆ.
ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ಘಟನೆ ಹಿನ್ನೆಲೆ: ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…