ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ, ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಕಾರ್ಕಳ ಸಂಚಾರಿ ಪೀಠದ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು, ಜಾಮೀನು ನೀಡಲು ನಿರಾಕರಿಸಿದ್ದಾರೆ.
ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿಸ್ಕರಿಸಿತ್ತು.
ಘಟನೆ ಹಿನ್ನೆಲೆ : ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20 ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25 ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…