Judge and gavel in courtroom
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮತ್ತೊಮ್ಮೆ ತಿರಸ್ಕರಿಸಿ ಮಂಗಳವಾರ ಆದೇಶ ನೀಡಿದೆ.
ಕೆಲವು ದಿನಗಳ ಹಿಂದೆ ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕಳೆದ ವಾರ ಪ್ರತಿಮಾ ಜಾಮೀನು ಕೋರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಇಲ್ಲಿ ಅರ್ಜಿ ಸಲ್ಲಿಸಿದ್ದರು. ಎರಡನೇ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿರುವುದರಿಂದ ತನಗೂ ಜಾಮೀನು ನೀಡುವಂತೆ ಪ್ರತಿಮಾ ಕೋರಿಕೊಂಡಿದ್ದಳು.
ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿ, ಎರಡನೇ ಆರೋಪಿಗೆ ಜಾಮೀನು ನೀಡಿದ್ದರೂ ಈಕೆಗೆ ಜಾಮೀನು ನೀಡಲು ಆಗುವುದಿಲ್ಲ. ಅವರಿಬ್ಬರ ಮೇಲಿನ ಆರೋಪಕ್ಕೆ ಸಾಮ್ಯತೆ ಇಲ್ಲ. ಆದುದರಿಂದ ಆಕೆಯ ಜಾಮೀನು ಅರ್ಜಿ ತಿರಸ್ಕಾರ ಮಾಡಬೇಕು ಎಂದು ವಾದಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಈಕೆ ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ 2024ರ ಅ.20ರಂದು ತನ್ನ ಪತಿ ಬಾಲಕೃಷ್ಣ ಪೂಜಾರಿ ಅವರನ್ನು ಕೊಲೆ ಮಾಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…