ಕಾರ್ಕಳ:  ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿಗೆ ಜಾಮೀನು ಮಂಜೂರು – vishwanews24

Featured, ಉಡುಪಿ

ಕಾರ್ಕಳ:  ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿಗೆ ಜಾಮೀನು ಮಂಜೂರು

ಕಾರ್ಕಳ : ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆ ಕೂಡ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಸಂಚು ರೂಪಿಸಿ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪದಡಿ ಅ. 25 ರಂದು ಅಜೆಕಾರು ಠಾಣಾ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.

Leave a Reply