Featured

ಕಾರ್ಕಳ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವು – vishwanews24

ಕಾರ್ಕಳ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವು

ಕಾರ್ಕಳ : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರಿಗೆ ಮಾಹಿತಿ ನೀಡಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಚಿರತೆಯು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯ ದೇಹವು ಕೊಳೆತ ಸ್ಥಿತಿಯಲ್ಲಿದ್ದುದನ್ನು ಗಮನಿಸಿದ ಅಧಿಕಾರಿಗಳು, ಇದು ಎರಡು-ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.

ಈ ಪರಿಸರದ ಸುತ್ತಮುತ್ತ ಹಲವಾರು ಮನೆಗಳಿದ್ದು, ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಗ್ರಾಮಸ್ಥರ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಲವು ಬಾರಿ ಬೋನು ಇರಿಸಿದ್ದರೂ, ಯಾವುದೇ ಚಿರತೆ ಸೆರೆಸಿಕ್ಕಿರಲಿಲ್ಲ.

ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

21 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

21 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

22 hours ago