Featured

ಕಾರ್ಕಳ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ; ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ : ಸುನೀಲ್ ಕುಮಾರ್ -Vishwanews24

ಕಾರ್ಕಳ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ;

ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ : ಸುನೀಲ್ ಕುಮಾರ್

ಕಾರ್ಕಳ, : ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಐತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. 2020ರಲ್ಲಿ ರೂ. 81 ಕೋಟಿ ವೆಚ್ಚದಲ್ಲಿ 87 ಕಿಂಡಿ ಅಣೆಕಟ್ಟು ನಿರ್ಮಾಣ, ರಾಮ ಸಮುದ್ರ ಸ್ವಚ್ಚತೆ ನಿರ್ಧಾರ, ತಾಲೂಕಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ನಿರ್ಮಾಣ, ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಅಭಿವೃದ್ಧಿ, ತಾಲೂಕು ಒಳಾಂಗಣ ಕ್ರೀಡಾಂಗಣ ಸೇರಿದಂತೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಒಳಗೊಂಡಂತೆ ಶೇ.90 ರಷ್ಟು ಜನರ ನಿರೀಕ್ಷೆಯಂತೆ ಕೆಲಸ ಕಾರ್ಯಗಳನ್ನು ಮಾಡಿರುವುದಾಗಿ ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಮಂಜುನಾಥ ಪೈ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆನೆಗುದ್ದಿಗೆ ಬಿದ್ದಿರುವ ಡೀಮ್ಡ್ ಫಾರೆಸ್ಟ್ ಸಮಸ್ಸೆ ಹಾಗೂ ಕುಮ್ಕಿ ಹಕ್ಕು ನೀಡುವ ವಿಚಾರದಲ್ಲಿ ಸರಕಾರ ಜನರಪರವಾಗಿಯೇ ಕಾರ್ಯನಿರ್ವಹಿಸಲಿದೆ. ಮುಂದಿನ ಕೆಲ ತಿಂಗಳ ಅವಧಿಯೊಳಗಾಗಿ ಸರಕಾರದ ಹೊಸ ಆದೇಶ ಹೊರಬೀಳಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

“ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 492 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಬ್ರಿ ತಾಲೂಕಿನಲ್ಲಿ 93 ಹಾಗೂ ಕಾರ್ಕಳ ತಾಲೂಕಿನಲ್ಲಿ 399 ಸ್ಥಾನಗಳಿವೆ. ಅದರಲ್ಲಿ ಬಿಜೆಪಿ ಬೆಂಬಲಿತ 36 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 34 ಗ್ರಾಮ ಪಂಚಾಯತ್‌ಗಳೆಲ್ಲವೂ ಬಿಜೆಪಿ ಗೆಲ್ಲಲ್ಲೇ ಬೇಕು. ನಲ್ಲೂರು ಗ್ರಾಮ ಪಂಚಾಯತ್ ವ್ಯಾಫ್ತಿಯ 15 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಬಿಜೆಪಿ ಬೆಂಬಲಿಗರು ಅವಿರೋಧ ಆಯ್ಕೆಯಾಗಿರುವ ಮೂಲಕ ಕಾರ್ಕಳ ತಾಲೂಕಿನಲ್ಲಿ ಮೊಟ್ಟ ಮೊದಲ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿಗರು ತಮ್ಮ ಬಗಲಿಗೆ ಹಾಕಿ ಕೊಂಡಿರುವುದು ಮೊದಲ ವಿಜಯ” ಎಂದು ಹೇಳಿದ್ದಾರೆ.

ಹಿರಿಯ ನೇತಾರ ಬೋಳ ಪ್ರಭಾಕರ ಕಾಮತ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಕೀಲರಾದ ಎಂ.ಕೆ.ವಿಜಯಕುಮಾರ್, ಮಣಿರಾಜ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ ಸಭೆಯನ್ನು ಉದ್ದೇಶಿ ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದು, ರೇಶ್ಮಾ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಜಯರಾಮ ಸಲ್ಯಾನ್,ಕುತ್ಯಾರು ನವೀನ್ ಶೆಟ್ಟಿ, ರವಿ ಅಮೀನ್ ಉಪಸ್ಥಿತರಿದ್ದರು.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago