ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ (ನಂದಳಿಕೆ) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ರವಿವಾರ ಸಂಜೆ ಕಾರ್ಕಳದಿಂದ ಸುಮಾರು 7.30ರ ವೇಳೆಗೆ ಸ್ಕೂಟಿಯಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ, ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ನೀಡಿ ಯೂ-ಟರ್ನ್ ಪಡೆಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಬೈಕ್ ಸ್ಕೂಟಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಿವಪ್ರಸಾದ್ ರಾವ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗಾಯಗಳ ತೀವ್ರತೆಯ ಕಾರಣ ಚಿಕಿತ್ಸೆಯು ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಕಂದಾಯ ಇಲಾಖೆಯ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದ ಶಿವಪ್ರಸಾದ್ ರಾವ್ ಅವರ ನಿಧನಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…