Featured

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ: ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಪ್ರಶ್ನಿಸಿದ್ದಾರೆ.

ದಿನೇದಿನೇ ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವ ಸಂದರ್ಭದಲ್ಲಿ ದಿನದೂಡುವುದೇ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಇರುವಾಗ ಅತ್ತ ಮಾಡಲು ಕೆಲಸವೂ ಇಲ್ಲದೆ ಕಂಗಾಲಾಗಿರುವ ಬಡ ಮತ್ತು ಮಧ್ಯಮವರ್ಗದವರ ಮೇಲೆ ಗ್ಯಾಸ್ ದರವನ್ನು ಕೇವಲ 10 ದಿನಗಳ ಎರಡು ಬಾರಿ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಉಪ್ಪು ಸವರಿದಂತೆ ಬಿಜೆಪಿ ಸರಕಾರವು ಮಾಡುತ್ತಿದೆ.

ಬಡವರ ಮಧ್ಯಮ ವರ್ಗದವರ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದು, ಸರಕಾರದ ಕೊರೋನಾ ನಿರ್ವಹಣೆಯ ವೈಫಲ್ಯದಿಂದ ಈಗಾಗಲೇ ಜನರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ. ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆ ಮಾಡುತ್ತಾ ಜನ ಸೇರಿಸುತ್ತಾ ಜನರ ದಿಕ್ಕು ತಪ್ಪಿಸುತ್ತ ಸಂಘ ಪರಿವಾರದ ಕಟ್ಟುಕತೆಗಳನ್ನು ಭಾಷಣಗಳಲ್ಲಿ ಹೇಳಿ ಅದನ್ನು ಸತ್ಯ ಮಾಡವ ಮತ್ತು ಜನರ ದಿಕ್ಕನ್ನು ತಪ್ಪಿಸವ ಕೆಲಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲಾಕ್ ಡೌನ್ ಮತ್ತು ವೀಕೆಂಡ್ ಕರ್ಫ್ಯೂ ನಿಂದ ಕೆಲಸ ಕಳೆದುಕೊಂಡವರು ದಿಕ್ಕೇ ತೋಚದಂತಾಗಿದ್ದಾರೆ ಅತ್ತ ಕೆಲಸವೂ ಇಲ್ಲ ಇತ್ತ ದಿನ ದೂಡಲು ಕೂಡ ಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ ಆದರೆ ಬಿಜೆಪಿ ಸರಕಾರ ಇದ್ಯಾವುದರ ಗೊಡವೆಯೇ ಇಲ್ಲದೆ ದಿನೇದಿನೇ ಅಗತ್ಯವಸ್ತುಗಳ ಮತ್ತು ಜನಬಳಕೆಯ ಸಮಾಗ್ರಿಗಳ ಬೆಲೆಯನ್ನು ಏರಿಸುದರಲ್ಲಿ ನಿರತರಾಗಿದ್ದಾರೆ ಇದೊಂದು ಕರುಣೆಯೇಯಿಲ್ಲದ ಸರಕಾರ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರಲ್ಲ ಎಂಬುದನ್ನು ಜನರು ಮನಗಾಣಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 days ago