ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ.
ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು ಅರ್ಧ ತೆರೆದಿದ್ದು, ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿರುವುದು ಕಂಡುಬಂದಿದೆ.
ಮನೆಯೊಳಗೆ ಪರಿಶೀಲಿಸಿ ನೋಡಿದಾಗ ಯಾರೋ ಕಳ್ಳರು ಮನೆಯ ಮುಖ್ಯದ್ವಾರದ ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿ ಬಾಗಿಲಿನ ಚಿಲಕವನ್ನು ಕಿಟಿಕಿಯ ಮೂಲಕ ತೆರೆದು ಮನೆಯೊಳಗೆ ಪ್ರವೇಶಿಸಿ ಮನೆಯ ಇನ್ನೊಂದು ಕೋಣೆಯೊಳಗೆ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಹುಡುಕಾಡಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2,25,000 ರೂ. ನಗದು ಎಗರಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…