Featured

ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ : 3ನೇ ಆರೋಪಿ ಶಾಲಾ ಶಿಕ್ಷಕಿ! vishwanews24

ಕಾರ್ಕಳ: ಸಾಣೂರು ವೇಶ್ಯಾವಾಟಿಕೆ ಪ್ರಕರಣ :  3ನೇ ಆರೋಪಿ ಶಾಲಾ ಶಿಕ್ಷಕಿ!

ಕಾರ್ಕಳ : ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಭಾಗಿಯಾಗಿ ಆರೋಪಿಗಳ ಪೈಕಿ ಮೂರನೇ ಆರೋಪಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಎಂಬ ಅಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡವರು ಸೆಪ್ಟೆಂಬರ್ 8 ರಂದು ದಿಢೀರ್ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ಕೃತ್ಯ ಬೆಳಕಿಗೆ ಬಂದಿದೆ.

ದಾಳಿ ವೇಳೆ ಸಂತ್ರಸ್ತೆಯೋರ್ವಳನ್ನು ರಕ್ಷಿಸಲಾಗಿದೆ. ಘಟನಾ ಸ್ಥಳದಿಂದ 6,000 ರೂ. ನಗದು, ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದ್ದ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

1ನೇ ಆರೋಪಿ ಭರತ್ ಜೈನ್ ನಾರಾವಿ ಅಲಿಯಾಸ್ ಭರತ್ ಶೆಟ್ಟಿ, 2ನೇ ಆರೋಪಿ ಉಳ್ಳಾಲದ ಸಂಪತ್ ಈತ ಯುವತಿ, ಮಹಿಳೆಯರನ್ನು ತನ್ನ ಗಾಳಕ್ಕೆ ಬಳಸಿ ಪುರುಷರಿಗೆ ಸರಬರಾಜು ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ. 3ನೇ ಆರೋಪಿ ಈದು ಪ್ರಮೀಳಾ ವಿಜಯಕುಮಾರ್ ಜೈನ್ ಆಗಿದ್ದಾಳೆ. ಈಕೆ ಹೊಸ್ಮಾರು ಸರಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು, ಪತಿ ಈದು ಗ್ರಾಮ ಪಂಚಾಯತ್‌ನ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ರಾಜಕೀಯ ದುರೀಣ ಎಂಬ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ನಾರಾವಿಯ ಭರತ್ ಜೈನ್ ಅಲಿಯಾಸ್ ಭರತ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದಲ್ಲಿ ಇತರರು ಭಾಗಿಯಾಗಿರುವ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡದವರ ಕಾರ್ಯಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತಗೊಂಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago