ಕಾರ್ಕಳ: ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ.
ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಮುಂದಿನ ತನಿಖೆ ಅರಣ್ಯ ಇಲಾಖೆಯವರು ವಹಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…