Featured

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ

ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ತೆಳ್ಳಾರು ದುರ್ಗಾ ಗ್ರಾಮದ ಪುಲ್ಲಾಟ್ ಎಂಬಲ್ಲಿ ಸೆ.28ರಂದು ನಡೆದಿದೆ.

ಗಾಯಗೊಂಡಿರುವ ಪುಲ್ಲಾಟ್ ನಿವಾಸಿ ಚಾಲ್ಸ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲ್ಸ್‌ಗೆ ಮದ್ಯಪಾನ ಮಾಡುವ ಚಟ ಇದ್ದು ಇವರ ಹೆಂಡತಿ 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ತಾಯಿ, ತಂದೆ ಹಾಗೂ ಮಗಳೊಂದಿಗೆ ವಾಸವಾಗಿರುವ ಚಾಲ್ಸ್ ಅವರ ಹಳೆ ಮನೆಯ ಸಮೀಪದಲ್ಲಿಯೇ ತಂದೆ ಮಥಾಯ್ ಹೊಸ ಮನೆಯನ್ನು ಕಟ್ಟುತ್ತಿದ್ದರು.

ರಾತ್ರಿ ಹಳೆಯ ಮನೆಯಲ್ಲಿ ತಾಯಿ ತ್ರೆಸಿಯಾಮ್ ಜೊತೆ ಮಗ ಚಾಲ್ಸ್ ಹೊಸ ಮನೆಯನ್ನು ನನಗೆ ಬಿಟ್ಟು ಕೊಡ ಬೇಕೆಂದು ಜಗಳವಾಡುತ್ತಿದ್ದು, ಈ ವೇಳೆಗೆ ಮಥಾಯ್ ಜಗಳ ಬಿಡಿಸಲು ಬಂದರು. ಈ ವೇಳೆ ಆಯಾ ತಪ್ಪಿ ಕೆಳಗೆ ಬಿದ್ದ ಮಥಾಯ್, ನಂತರ ಹೊಸದಾಗಿ ಕಟ್ಟುತ್ತಿರುವ ಮನೆಯ ಶೆಡ್ ಮುಂದೆ ಕುಳಿತುಕೊಂಡಿದ್ದರು.

ಅಲ್ಲಿಗೆ ಬಂದ ಚಾಲ್ಸ್ ತಂದೆಗೆ ಹೊಡೆಯಲು ಬಂದನು. ಆಗ ತಂದೆ ಮಥಾಯ್ ಕತ್ತಿಯಿಂದ ಚಾಲ್ಸ್‌ನ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಕಡಿದು ಕೊಲೆಗೆ ಯತ್ನಿಸಿದರೆಂದು ದೂರಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿರುವ ಚಾಲ್ಸ್ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

26 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

56 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago