ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ, ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 25 ನೇ ತಾರೀಕಿನಂದು ಕಾರ್ಕಳಕ್ಕೆ ಆಗಮಿಸಿದ್ದು ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಮ್. ವೀರಪ್ಪ ಮೊಯಿಲಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ನೀಡಿದ್ದರು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನುದಾನ ನೀಡುವ ಭರವಸೆಯನ್ನು ನೀಡಿದ್ದರು, ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರೂಪಾಯಿಗಳ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಕಳ ಜನತೆಯ ಪರವಾಗಿ ಉದಯ ಶೆಟ್ಟಿ, ಮುನಿಯಾಲು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…