ಕಾರ್ಕಳ ಮಹಾಮಸ್ತಕಾಭಿಷೇಕ ವಿಶೇಷ ಅನುದಾನಕ್ಕೆ ಖಾದರ್ಗೆ ಡಾ| ಎಂ ಎನ್ ಆರ್ ಮನವಿ – vishwanews24
ಕಾರ್ಕಳ ಮಹಾಮಸ್ತಕಾಭಿಷೇಕ ವಿಶೇಷ ಅನುದಾನಕ್ಕೆ ಖಾದರ್ಗೆ ಡಾ| ಎಂ ಎನ್ ಆರ್ ಮನವಿ
ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ ನಡೆಯಲಿದೆ.
ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ. ಇದಕ್ಕಾಗಿ ಕಾರ್ಕಳ ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ಸರಕಾರದಿಂದ ವಿಶೇಷ ಅನುದಾನ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸಮಿತಿಯ ಕಾರ್ಯಾಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಬೆಂಗಳೂರಿನಲ್ಲಿ ಮನವಿಯನ್ನು ಸಲ್ಲಿಸಿದರು.
ಇದನ್ನೂ ಓದಿ : 👇
ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು – vishwanews24
ಈ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ವೃಷಭ ದೇವ ಅಧಿಕಾರಿ ವರಂಗ ಉಪಸ್ಥಿತರಿದ್ದರು.
