Featured

ಕಾರ್ಕಳ ಮಹಾಮಸ್ತಕಾಭಿಷೇಕ: ವಿಶೇಷ ಅನುದಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮನವಿ – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ: ವಿಶೇಷ ಅನುದಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮನವಿ

ಮಂಗಳೂರು: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂರ್ತಿಯ ಮಹಾ ಮಸ್ತಕಾಭಿಷೇಕ
2027ರಲ್ಲಿ ನಡೆಯಲಿದ್ದು, ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರಿಗೆ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ ಅವರು ಮನವಿ ಮಾಡಿದರು.
ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶವನ್ನು ವಿಶ್ವಕ್ಕೆ ಪಸರಿಸುತ್ತಿರುವ ಬಾಹುಬಲಿ ಸ್ವಾಮಿಯ ದಿವ್ಯ ಚೇತನ ಸರ್ವಧರ್ಮೀಯರಿಗೂ ಆದರಣೀಯವಾಗಿದೆ. ಇಂತಹ ಸಂದೇಶದ ಜತೆಗೆ ಶ್ರದ್ಧಾ ಭಕ್ತಿಯಿಂದ ನಡೆಯುವ 2027ರ ಮಹಾಮಸ್ತಕಾಭಿಷೇಕವು ಧಾರ್ಮಿಕ ನೆಲೆಯ ಆರಾಧನಾ ಪರಂಪರೆಯನ್ನು ಬಿಂಬಿಸಲಿದೆ. ಈ ನಿಟ್ಟಿನಲ್ಲಿ 2027ರ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ.

ಇದನ್ನೂ ಓದಿ👇

ಮಹಾಮಸ್ತಾಕಾಭಿಷೇಕದ ವೇಳೆ ಲಕ್ಷಾಂತರ ಭಕ್ತ ಜನರು ಕಾರ್ಕಳಕ್ಕೆ ಬರುವ ಸಾಧ್ಯತೆಯಿದೆ. ಈ ಸಂದರ್ಭ ಕಾರ್ಕಳ ನಗರದಲ್ಲಿ ವಿವಿಧ ಕಾಮಗಾರಿ ನಡೆಯಬೇಕಾಗಿದ್ದು ಅದಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಯಿತು. ವಿವಿಧ ಇಲಾಖೆಗಳ ಮೂಲಕ ನಡೆಯಬೇಕಾದ ಕಾಮಗಾರಿಗಳ ವಿವರವಾದ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಮೇಘರಾಜ್ ಆರ್. ಜೈನ್ ಹಾಗೂ ಇನಾಯತ್ ಅಲಿ ಇದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago