ಮಂಗಳೂರು: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂರ್ತಿಯ ಮಹಾ ಮಸ್ತಕಾಭಿಷೇಕ
2027ರಲ್ಲಿ ನಡೆಯಲಿದ್ದು, ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರಿಗೆ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಮನವಿ ಮಾಡಿದರು.
ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶವನ್ನು ವಿಶ್ವಕ್ಕೆ ಪಸರಿಸುತ್ತಿರುವ ಬಾಹುಬಲಿ ಸ್ವಾಮಿಯ ದಿವ್ಯ ಚೇತನ ಸರ್ವಧರ್ಮೀಯರಿಗೂ ಆದರಣೀಯವಾಗಿದೆ. ಇಂತಹ ಸಂದೇಶದ ಜತೆಗೆ ಶ್ರದ್ಧಾ ಭಕ್ತಿಯಿಂದ ನಡೆಯುವ 2027ರ ಮಹಾಮಸ್ತಕಾಭಿಷೇಕವು ಧಾರ್ಮಿಕ ನೆಲೆಯ ಆರಾಧನಾ ಪರಂಪರೆಯನ್ನು ಬಿಂಬಿಸಲಿದೆ. ಈ ನಿಟ್ಟಿನಲ್ಲಿ 2027ರ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ.
ಇದನ್ನೂ ಓದಿ👇
ಮಹಾಮಸ್ತಾಕಾಭಿಷೇಕದ ವೇಳೆ ಲಕ್ಷಾಂತರ ಭಕ್ತ ಜನರು ಕಾರ್ಕಳಕ್ಕೆ ಬರುವ ಸಾಧ್ಯತೆಯಿದೆ. ಈ ಸಂದರ್ಭ ಕಾರ್ಕಳ ನಗರದಲ್ಲಿ ವಿವಿಧ ಕಾಮಗಾರಿ ನಡೆಯಬೇಕಾಗಿದ್ದು ಅದಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಯಿತು. ವಿವಿಧ ಇಲಾಖೆಗಳ ಮೂಲಕ ನಡೆಯಬೇಕಾದ ಕಾಮಗಾರಿಗಳ ವಿವರವಾದ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಮೇಘರಾಜ್ ಆರ್. ಜೈನ್ ಹಾಗೂ ಇನಾಯತ್ ಅಲಿ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…