ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮಾ.3 ರಂದು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ನೀಡಿದೆ. 2026–27ನೇ ಸಾಲಿನ ಆಯವ್ಯಯದಲ್ಲಿ ಜೈನ, ಬೌದ್ಧ ಮತ್ತು ಸಿಖ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲಾಗುತ್ತದೆ.
ಇದನ್ನೂ ಓದಿ:
ಈ ಅನುದಾನದ ಮೂಲಕ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ನಿರ್ಮಾಣ, ಕಾರ್ಕಳ ಗ್ರಾಮೀಣ ಪ್ರದೇಶದಲ್ಲಿರುವ ಅಜೆಕಾರು, ರಂಜಾಳ, ಮುಂಡ್ಲಿ, ಶಿರ್ಲಾಲು ಸೂಡಿ ಮತ್ತು ನಲ್ಲೂರು ಕೂಷ್ಮಾಂಡಿನಿ ಬಸದಿಗಳ ಸಂಪರ್ಕ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ. ಜೊತೆಗೆ ಜೈನ ಮಠದ ತ್ಯಾಗಿ ಭವನ, ಮಾತಾಜಿ ಭವನ ಹಾಗೂ ಸಭಾಂಗಣ ನವೀಕರಣ, ಗೊಮ್ಮಟೇಶ್ವರ ಬೆಟ್ಟಕ್ಕೆ ನೀರಿನ ಸರಬರಾಜು ಮತ್ತು ಕೊಳವೆಬಾವಿ ನಿರ್ಮಾಣ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಯೋಜನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ, ಒಟ್ಟು ಅನುದಾನದ ಶೇ.75 ರಷ್ಟು ಮೊತ್ತವನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…