Featured

ಕಾರ್ಕಳ: ಮಹಿಳೆಯ ಚಿನ್ನಾಭರಣ ದರೋಡೆ ಪ್ರಕರಣ : ಆರೋಪಿಯ ಮಗಳು ಸಹಿತ ಮೂವರ ಬಂಧನ -Vishwanews24

ಕಾರ್ಕಳ: ಬೆಳ್ಮಣ್ ಗುಂಡ್ಯಡ್ಕ ಮಟ್ಕಾಕೆರೆ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಚೈನ್ ಹಾಗೂ ಪಾರ್ಸ್‌ಪೋರ್ಟ್ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಹಿತ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣಾಧಿಕಾರಿ ನಾಜೀರ್ ಹುಸೈನ್ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಳ್ಮಣ್‌ನ ರೆನಿಟಾ ಪಿಯಾ(22), ಶಿರ್ವದ ಫಯಾಸ್(25), ಶಿರ್ವದ ಶೇಯಾಬ್(28) ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿ ಆಶೀಸ್(28) ಬೇರೆಯೊಂದು ಪ್ರಕರಣದಲ್ಲಿ ಸಿಲುಕಿ ಈಗಾಗಲೇ ಜೈಲಿನೊಳಗಿದ್ದಾನೆ.

ಘಟನೆಯ ವಿವರ:
2019 ನವಂಬರ್ 23ರ ಮಧ್ಯಾಹ್ನ 1.30ರ ವೇಳೆಗೆ ಬೆಳ್ಮಣ್ ಗ್ರಾಮದ ಗುಂಡ್ಯಡ್ಕ ಎಂಬಲ್ಲಿ ಈ ಪ್ರಕರಣ ನಡೆದಿದೆ. ಎರಡು ಬೈಕ್‌ನಲ್ಲಿ ಬಂದಿದ್ದ ರೆನಿಟಾ ಪಿಯಾ ಸಹಿತ ನಾಲ್ವರು ಆರೋಪಿತರು ಐರಿನ್ ಮಥಾಯಸ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಿಸಿದರು. ಕೊಠಡಿಯಲ್ಲಿ ಮಲಗಿಕೊಂಡಿದ್ದ ನತಾಲಾ ಮಥಾಯಸ್‌ರವರ ಕುತ್ತಿಗೆಯಲ್ಲಿದ್ದ ಸುಮಾರು 2 ಪವನ್ ತೂಕದ ಕ್ರಾಸ್ ಪೆಂಡೆಂಟ್ ಇರುವ ಚಿನ್ನದ ಸರವನ್ನು ಎಳೆದೊಯ್ದಿದ್ದರು. ಇದೇ ಸಂದರ್ಭದಲ್ಲಿ ಮೈದುನ ಜೆರಾಲ್ಡ್ ಮಥಾಯಸ್‌ನ ಪಾಸ್ ಪೋರ್ಟ್‌ನ್ನು ಆರೋಪಿಗಳು ಹೊತ್ತೊಯ್ದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿತ್ತು.ಈ ಕೃತ್ಯದಲ್ಲಿ ತೊಡಗಿದ್ದವರ ಪೈಕಿ ರೆನಿಟಾ ಪಿಯಾ ಪರಿಚಯಸ್ಥೆಯಾಗಿದ್ದಳು.

ಡಿಸೆಂಬರ್ 20ರಂದು ಬೆಳ್ಮಣ್‌ನ ಬೃಂದಾವನ ಮನೆಯಲ್ಲಿದ್ದ ಒಂಟಿ ಮಹಿಳೆ ಬಿ.ಭರತ ಲಕ್ಷ್ಮೀ(68) ಕೊಲೆಗೈದು ಅಪಾರ ಪ್ರಮಾಣದಲ್ಲಿ ಚಿನ್ನಾಭರಣವನ್ನು ದರೋಡೆ ಮಾಡಿ, ಮೃತದೇಹವನ್ನು ಕಲ್ಯಾ ಹಾಳೆಕಟ್ಟೆಯ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಬಾವಿ ಎಸೆದಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಬೆಳ್ಮಣ್ ರೋನಾಲ್ಡ್ ಬರ್ಬೋಜಾ(45) ಎಂಬಾತನ ಮಗಳೇ ರೆನಿಟಾ ಪಿಯಾ.

ಶೋಕಿ ಜೀವನ ನಡೆಸುವ ಉದ್ದೇಶ ಹೊಂದಿ ಯುವತಿ ಕ್ರಿಮಿನಲ್ ಇತಿಹಾಸ ಹೊಂದಿರುವ ಯುವಕರ ತಂಡವೊಂದನ್ನು ಕಟ್ಟಿಕೊಂಡು ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಳು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಕಳವುಗೈದ 2 ಪವನ್ ತೂಕದ ಕ್ರಾಸ್ ಪೆಂಡೆಂಟ್ ಇರುವ ಚಿನ್ನದ ಸರವನ್ನು ಕಳವುಗೈದ ಆರೋಪಿತರು ಮಂಗಳೂರು ಉರ್ವದ ಲೇಡಿಹಿಲ್ ದಿವ್ಯ ಜುವೆಲ್ಲರ್‍ಸ್‌ಗೆ ಮಾರಾಟ ಮಾಡಿರುವ ಅಂಶವನ್ನು ಪೊಲೀಸ ತನಿಖೆಯಿಂದ ತಿಳಿದುಬಂದಿದೆ.

 

Vishwa News 24

Recent Posts

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

26 seconds ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

17 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago