Featured

ಕಾರ್ಕಳ:  ಮಾರ್ಚ್ 10 ರಿಂದ 20ರವರೆಗೆ ಕಾರ್ಕಳ ಉತ್ಸವ – Vishwanews24

ಕಾರ್ಕಳ:  ಮಾರ್ಚ್ 10 ರಿಂದ 20ರವರೆಗೆ ಕಾರ್ಕಳ ಉತ್ಸವ – Vishwanews24

ಕಾರ್ಕಳ:ಉಡುಪಿ‌ ಜಿಲ್ಲೆಯ ಕಾರ್ಕಳದಲ್ಲಿ ಮಾರ್ಚ್ 10 ರಿಂದ 20ರವರೆಗೆ ಕಾರ್ಕಳ ಉತ್ಸವ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಕಳ ಉತ್ಸವ ನಡೆಯಲಿದೆ.
ಜಸ್ಟೀಸ್ ಕೆ.ಎಸ್. ಹೆಗ್ಡೆ ವೇದಿಕೆ, ಗೋಪಾಲ ಭಂಡಾರಿ ವೇದಿಕೆ ಮತ್ತು ರೆಂಜಾಳ ಗೋಪಾಲಕೃಷ್ಣ ಶೆಣೈ ವೇದಿಕೆಗಳಲ್ಲಿ 10 ದಿನಗಳ ಕಾಲ ಉತ್ಸವ ಜರುಗಲಿದೆ. ಲೋಕಸಭೆ ಮಾಜಿ ಸ್ಪೀಕರ್ ದಿ. ಜಸ್ಟೀಸ್ ಕೆ.ಎಸ್. ಹೆಗ್ಡೆ ಹೆಸರನ್ನು ಸ್ವರಾಜ್ ಮೈದಾನದಲ್ಲಿನ ವೇದಿಕೆಗೆ ಇಡಲಾಗಿದೆ. ಈ ವೇದಿಕೆಯಲ್ಲಿ ಉತ್ಸವದ ಕೊನೆಯ ಮೂರು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳು ರಾಜ್ಯದ ಪ್ರಸಿದ್ಧ ಕಲಾವಿದರ ಉಪಸ್ಥಿತಿಯಲ್ಲಿ ಸಂಗಮಗೊಳ್ಳಲಿದೆ.
ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಹೆಸರನ್ನು ಗಾಂಧಿ ಮೈದಾನದ ವೇದಿಕೆಗೆ ಇಡಲಾಗಿದೆ. ಈ ವೇದಿಕೆಯಲ್ಲಿ ಮಾರ್ಚ್ 10 ರಂದು ಉತ್ಸವ ಉದ್ಘಾಟನೆಯಿಂದ ಮೊದಲ್ಗೊಂಡು ಏಳು ದಿನಗಳ ಕಾಲ ಕನ್ನಡ, ತುಳು, ಕೊಂಕಣಿ ಕಾರ್ಯಕ್ರಮಗಳು, ಯಕ್ಷಗಾನ, ನಾಟಕ, ಸಂಗೀತ ಮತ್ತು ಹಾಸ್ಯ ಕಾರ್ಯಕ್ರಮಗಳು ನಡೆಯಲಿವೆ. ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಶಿಲ್ಪಿ ದಿ‌. ರೆಂಜಾಳ ಗೋಪಾಲಕೃಷ್ಣ ಅವರ ಹೆಸರನ್ನು ವಸ್ತು ಪ್ರದರ್ಶನದ ಒಂದು ಭಾಗಕ್ಕೆ ಇಡಲಾಗಿದೆ.
ಚಿತ್ರಕಲೆ ಮತ್ತು ಶಿಲ್ಪಕಲೆಯ ವಿವಿಧ ಪ್ರದರ್ಶನಗಳು ಬೇರೆ ಬೇರೆ ರಾಜ್ಯಗಳ ವಿಶೇಷ ಕಲೆಗಳು ಇಲ್ಲಿ ಅನಾವರಣಗೊಳ್ಳಲಿದೆ. ಕಾರ್ಕಳ ಶಾಸಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹತ್ತು ದಿನಗಳ ಕಾಲ ಕಾರ್ಕಳ ಉತ್ಸವ ಆಯೋಜಿಸಿದ್ದಾರೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago