ಕಾರ್ಕಳ : ಮಾ.3 ರಂದು ಹೆಬ್ರಿ ತಾಲೂಕಿನ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ – Vishwanews24
ಕಾರ್ಕಳ : ಮಾ.3 ರಂದು ಹೆಬ್ರಿ ತಾಲೂಕಿನ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ
ಕಾರ್ಕಳ : ಹೆಬ್ರಿ ತಾಲ್ಲೂಕು ವ್ಯಾಪ್ತಿಯ 100 ಮಂದಿ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ಹಾಗೂ ಸರಕಾರದ ವಿವಿಧ ಇಲಾಖೆಗಳ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಮಾ.3 ಶುಕ್ರವಾರ 2023 ರಂದು ಮಧ್ಯಾಹ್ನ 3 ಗಂಟೆಗೆ ಮುದ್ರಾಡಿ ಗ್ರಾಮದ ಸಮುದಾಯ ಭವನದಲ್ಲಿ ನಡೆಯಲಿದೆ.
ಸುಮಾರು ವರ್ಷಗಳಿಂದ ಬಾಕಿ ಇದ್ದಂತಹಾ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹಕ್ಕು ಪತ್ರ ನೀಡುವ ಪ್ರಕ್ರಿಯೆಗೆ ಈಗಾಗಲೆ ಚಾಲನೆ ದೊರೆತಿದ್ದು, ಇದರ ಮುಂದುವೆರದ ಭಾಗವಾಗಿ ಮಾರ್ಚ್ 03ನೇ ತಾರೀಕಿನಂದು 100 ಹೊಸ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬಂಟ್ವಾಳ: ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ : ರಮಾನಾಥ ರೈ – Vishwanews24
ಮಾನ್ಯ ಸಚಿವರ ವಿಶೇಷ ಮುತುವರ್ಜಿ ಯಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು, ಸರ್ಕಾರದ ಅನೇಕ ಯೋಜನೆಗಳನ್ನು ಸಮಾಜದ ಎಲ್ಲಾ ಸ್ಥರದ ಜನರಿಗೆ ತಲುಪಿಸುವಲ್ಲಿ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
