ಕಾರ್ಕಳ: ತಾಲೂಕಿನ ಮಿಯಾರು ಕಂಬಳಿಕ್ರಾಸ್ ಬಳಿ ಇಂದು (ಜ.23) ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.
ಮಧ್ಯಾಹ್ನ ಸುಮಾರು 3.30ಕ್ಕೆ ಸಂಭವಿಸಿದ ಈ ದುರ್ಘಟನೆಯಲ್ಲಿ ತುಫಾನ್‌ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…