Featured

ಕಾರ್ಕಳ : ಖಾಸಗಿ ಬಸ್ ಮತ್ತು ತುಫಾನ್ ವಾಹನ ಅಪಘಾತ – ಮೂವರು ಸಾವು ; ಆರು ಮಂದಿ ಗಂಭೀರ – vishwanews24

ಕಾರ್ಕಳ : ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್ ಮತ್ತು ತುಫಾನ್ ಅಪಘಾತ ; ಮೂವರು ಸಾವು – ಆರು ಮಂದಿ ಗಂಭೀರ

ಕಾರ್ಕಳ: ತಾಲೂಕಿನ ಮಿಯಾರು ಕಂಬಳಿಕ್ರಾಸ್ ಬಳಿ ಇಂದು (ಜ.23) ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ  ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.

ಮಧ್ಯಾಹ್ನ ಸುಮಾರು 3.30ಕ್ಕೆ ಸಂಭವಿಸಿದ ಈ ದುರ್ಘಟನೆಯಲ್ಲಿ ತುಫಾನ್‌ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago