ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿ0ದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯAಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿAದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…