ಕಾರ್ಕಳ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ಉಡುಪಿ ಜಿಲ್ಲೆಯ ಕಾರ್ಕಳದ ಶಾಸಕರ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಈ ವೇಳೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ, ಡಾ ಧನಂಜಯ ಸರ್ಜಿಯವರು ವೈದ್ಯರಾಗಿ ಶಿವಮೊಗ್ಗದಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕ್ರಿಯಾಶೀಲ ವ್ಯಕ್ತಿ. ಇನ್ನು ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್. ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ, ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಭಾರಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೆತ್ರದಿಂದ ಎನ್ ಡಿ ಎ ಅಭ್ಯರ್ಥಿಯಾಗಿ ಎಸ್. ಎಲ್ ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ. ಇವರ ಗೆಲುವಿಗೆ ವಾರ್ಡ್, ಬೂತ್ ಗಳಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ ಧನಂಜಯ ಸರ್ಜಿ , ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ, ವಿಭಾಗ ಪ್ರಭಾರಿಗಳಾದ ಉದಯ ಕೆಲ್ ಶೆಟ್ಟಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಯೋಗೀಶ್ , ದೇಶಪಾಲ ಶೆಟ್ಟಿ , ಮುನಿರಾಜ ಶೆಟ್ಟಿ , ಜಿಲ್ಲಾ ಕಾರ್ಯದರ್ಶಿಗಳಾದ ಉದಯ ಕಠಾರೆ , ಮಹಾವೀರ ಹೆಗಡೆ , ರೇಷ್ಮಾ ಉದಯ ಶೆಟ್ಟಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…