Featured

ಕಾರ್ಕಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸುನಿಲ್ ಕುಮಾರ್ ಭೇಟಿ – vishwanews24

ಕಾರ್ಕಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸುನಿಲ್ ಕುಮಾರ್ ಭೇಟಿ

ಕಾರ್ಕಳ: ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸುನಿಲ್ ಕುಮಾರ್ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪ್ರಸಕ್ತ ವಿದ್ಯಮಾನ ಕುರಿತು ಪರಿಶೀಲನೆ ನಡೆಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಮದರಸ ಎಸ್.ಮಕಾಂದರ, ಶಾಲೆಯ ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸುವುದು ಇತರ ದೈಹಿಕ ಶಿಕ್ಷೆಗಳನ್ನು ನೀಡುವುದು ಸೇರಿ.ದಂತೆ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಶಾಸಕರು ಶಾಲೆಗೆ ಭೇಟಿ ನೀಡಿ ಸಭೆ ನಡೆಸಿದರು.

ಮೊರಾರ್ಜಿ ವಸತಿ ಶಾಲೆಯು ಉತ್ತಮ ಹಾಗೂ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇದೀಗ ಇಂತಹ ಶಿಕ್ಷಕರ ದುರ್ವರ್ತನೆಯಿಂದಾಗಿ ಶಾಲೆಯ ಉತ್ತಮ ವಾತವರಣ ಕೆಡಿಸಿದಂತಾಗಿದೆ. ಈ ರೀತಿಯ ಘಟನೆಗಳು ನಮ್ಮ ಕಾರ್ಕಳದಲ್ಲಿ ನಡೆದಿರುವುದು ಅತ್ಯಂತ ಖಂಡನೀಯ. ಇಂತಹ ಘಟನೆ ಸಮಾಜದ ನಡುವೆ ಒಡಕು ಸೃಷ್ಠಿಸಲು ಕುಮ್ಮಕ್ಕು ನೀಡಿದಂತಾಗುತ್ತದೆ. ಆದ ಕಾರಣ ಇಂತಹ ಶಿಕ್ಷಕರ ವಿರುದ್ದ ಸೂಕ್ತ ಶಿಕ್ಷೆ ಆಗುವಂತೆ ಹಾಗೂ ಈ ರೀತಿಯ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂಬ ಶಾಸಕರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಶಾಲೆಯ ಶಿಕ್ಷಕ ವರ್ಗ, ಅಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

10 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

12 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

12 hours ago