Featured

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ

ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣʼ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣʼ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿಖ್ಯಾತ ಯಕ್ಷಗಾನ ಮತ್ತು ನಾಟಕರಂಗದ ಪರಂಪರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಹತ್ತರ ದೂರದೃಷ್ಟಿಯೊಂದಿಗೆ ಕಾರ್ಕಳದಲ್ಲಿ ಯಕ್ಷರಂಗಾಯಣ ಸ್ಥಾಪನೆ ಮಾಡಲಾಗಿತ್ತು. ಹೆಸರು ಬದಲಿಸುವ ಈ ದಿಢೀರ್‌ ಮತ್ತು ದುರುದ್ದೇಶಪೂರಿತ ನಡೆ ಇಡೀ ಕರಾವಳಿಯ ಯಕ್ಷಗಾನ ಕಲೆಗೆ, ರಂಗಭೂಮಿಗೆ ಹಾಗೂ ಹಗಲಿರುಳು ಈ ಕಲೆಯನ್ನೇ ನಂಬಿ ಬದುಕುತ್ತಿರುವ ಸಾವಿರಾರು ಕಲಾವಿದರ ಸ್ವಾಭಿಮಾನಕ್ಕೆ ಮಾಡಿರುವ ಘೋರ ಅಪಮಾನವಾಗಿದೆ. ಇದು ಯಕ್ಷಗಾನ ಕಲೆಯ ಕತ್ತು ಹಿಸುಕುವ ರಾಜ್ಯ ಸರಕಾರದ ವ್ಯವಸ್ಥಿತ ಸಂಚು ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರಕಾರದ ಆಡಳಿತದಲ್ಲಿ ನಾನು ಕನ್ನಡ ಮತ್ತು ಸಂಸ್ಕ್ರತಿ ಸಚಿವನಾಗಿದ್ದಾಗ ಇಡೀ ಅವಿಭಜಿತ ಜಿಲ್ಲೆಯ ಅಸ್ಮಿತೆಯಾದ ಯಕ್ಷಗಾನ ಕಲೆಯನ್ನು ಯಕ್ಷಗಾನದ ಹೆಸರಲ್ಲೇ ಯುವ ಜನಾಂಗಕ್ಕೆ ಪರಿಚಯಿಸಬೇಕು ಆಶಯದಿಂದ ಆರಂಭಿಸಲಾಗಿತ್ತು. ಆ ಬಳಿಕ ಈ ಕೇಂದ್ರದಲ್ಲಿ ನಿರಂತರ ಯಕ್ಷಗಾನ, ನಾಟಕ ಕಲೆಗೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಯುವ ಸಮೂಹ ಯಕ್ಷಗಾನ, ನಾಟಕ ಕಲೆಯತ್ತ ಆಕರ್ಷಿತರಾಗಿದ್ದರು ಎಂದಿದ್ದರು.

ಯಕ್ಷ ರಂಗಾಯಣದ ಕಟ್ಟಡ ನಿರ್ಮಾಣ ಇತ್ಯಾದಿಗಳಿಗೆ ಸುಮಾರು 2 ಕೋಟಿ ರೂ ಹಣ ಮಂಜೂರಾಗಿ ಯಕ್ಷರಂಗಾಯಣ ಹೆಸರಲ್ಲಿ ಕಟ್ಟಡಗಳ ನಿರ್ಮಾಣವಾಗಿದೆ. ಆದರೆ, ಇವತ್ತು ಆ ಹೆಸರಿನಿಂದ ‘ಯಕ್ಷʼ ಎಂಬ ಪದವನ್ನೇ ಕಿತ್ತೊಗೆಯುವ ಮೂಲಕ ಸರಕಾರ ಯಾರ ಓಲೈಕೆಗೆ ನಿಂತಿದೆ? ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ‘ಯಕ್ಷಗಾನʼದ ಹೆಸರನ್ನು ಸಾಂಸ್ಕೃತಿಕ ಭೂಪಟದಿಂದಲೇ ಅಳಿಸಿ ಹಾಕಲು ಹೊರಟಿರುವ ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ? ಕಲೆಯ ಹೆಸರನ್ನು ಬದಲಿಸಲು ಸರಕಾರಕ್ಕೆ ಒತ್ತಡ ಹೇರಿದ ಆ ಅದೃಶ್ಯ ಶಕ್ತಿಗಳು ಯಾವುವು ಎಂದು ಸುನಿಲ್‌ ಕುಮಾರ್ ಪ್ರಶ್ನಿಸಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರ ಅವಧಿಯಲ್ಲಿ ನಾಡಿನ ಸಾಂಸ್ಕ್ರತಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗಿತ್ತು. ಯಕ್ಷಗಾನ ಸಮಾವೇಶ, ಮೇಳ, ಹೀಗೆ ಹಲವು ವಿಧದ ಕಾರ್ಯಕ್ರಮ ಕೈಗೊಂಡು ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸಲಾಗಿತ್ತು. ಆದರೇ ಈ ಸರಕಾರ ಆಡಳಿತಕ್ಕೆ ಬಂದ ಬಳಿಕ ಕಲೆಗೆ ಒಂದಲ್ಲ ಒಂದು ರೀತಿ ದ್ರೋಹ ಬಗೆಯುವ ಪ್ರಯತ್ನ ನಡೆಸುತ್ತಿದೆ. ಯಕ್ಷಗಾನ ಕಲೆಯನ್ನು ಕೂಡ ಈ ಸರಕಾರಕ್ಕೆ ಸಹಿಸಲಾಗುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕರಾವಳಿ ರಂಗಾಯಣ ಎಂದು ಹೆಸರು ಬದಲಿಸುವ ನಿರ್ಧಾರಕ್ಕೆ ಮುನ್ನ ಕರಾವಳಿ ಭಾಗದವರ ಜನಪ್ರತಿನಿಧಿಗಳ ಜೊತೆ ಚರ್ಚಿಸದೇ, ಯಾರ ಗಮನಕ್ಕೂ ತಾರದೆ, ಸ್ಥಳಿಯರ ವಿಶ್ವಾಸ ಗಳಿಸದೆ ತರಾತುರಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದವರು ಆರೋಪಿಸಿದ್ದಾರೆ.

ಯಕ್ಷಗಾನ ಎಂಬುದು ಕೇವಲ ಒಂದು ಪ್ರದರ್ಶನ ಕಲೆಯಲ್ಲ. ಅದು ಕರಾವಳಿಯ ರಕ್ತಗತವಾಗಿ ಬಂದಿರುವ ಭಾವುಕ ಸಾಂಸ್ಕೃತಿಕ ಅಸ್ಮಿತೆ. ಇಂತಹ ಕಲೆಯ ಗೌರವಕ್ಕೆ ಧಕ್ಕೆ ತಂದಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರವು ತನ್ನ ಈ ಹಠಮಾರಿ ಮತ್ತು ವಿವೇಚನಾರಹಿತ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ರಾಜಕೀಯ ದುರುದ್ದೇಶಗಳನ್ನು ಬದಿಗಿಟ್ಟು, ಕೇಂದ್ರಕ್ಕೆ ‘ಯಕ್ಷರಂಗಾಯಣʼ ಎಂಬ ಮೂಲ ಹೆಸರನ್ನೇ ಉಳಿಸಬೇಕು. ಸರ್ಕಾರ ಒಂದು ವೇಳೆ ತನ್ನ ಪಟ್ಟನ್ನು ಸಡಿಲಿಸದೆ ಹೋದರೆ, ಅವಿಭಜಿತ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಸಮಸ್ತ ಯಕ್ಷಗಾನ ಅಭಿಮಾನಿಗಳ ಮೇಳಗಳ ಕಲಾವಿದರು ಹಾಗೂ ರಂಗದ ದಿಗ್ಗಜರ ತೀವ್ರ ವಿರೋಧವನ್ನು ಎದುರಿಸಬೇಕಾದಿತು ಎಂದು ಶಾಸಕ ಸುನಿಲ್‌ ಕುಮಾರ್‌ ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago